Bio Energy Karnataka > ಸಾರ್ವಜನಿಕರಿಗೆ > ಜೈವಿಕ ಇಂಧನದ ಅನುಕೂಲತೆಗಳು

ಜೈವಿಕ ಇಂಧನದ ಅನುಕೂಲತೆಗಳು

  • ಜೈವಿಕ ಇಂಧನದ ಕಾರ್ಯಕ್ರಮ ಹಲವಾರು ಉದ್ಯೋಗ ಅವಕಾಶಗಳನ್ನು ಒದಗಿಸುವುದರ ಜೊತೆಗೆ, ರೈತರು, ಕೃಷಿ ಕಾರ್ಮಿಕರು ಬಿಡುವಿನ ವೇಳೆಯಲ್ಲಿ ಬೀಜ ಸಂಗ್ರಹಣೆ ಮತ್ತು ಮಾರಾಟದಿಂದ ಅಧಿಕ ಆರ್ಥಿಕ ಲಾಭ ಗಳಿಸಬಹುದು.
  • ಹಲವು ಸಂಶೋಧನೆಗಳಿಂದ ಜೈವಿಕ ಇಂಧನ ಪೆಟ್ರೋಲಿಯಂ ಇಂಧನಕ್ಕಿಂತ ಕಡಿಮೆ ಪ್ರಮಾಣದಲ್ಲಿ ಕಾರ್ಬನ್ ಆಕ್ಸೈಡ್‌ಗಳನ್ನು ವಾತಾವರಣಕ್ಕೆ ಬಿಡುತ್ತದೆ ಎಂದು ಕಂಡುಬಂದಿದೆ.
  • ಪೆಟ್ರೋಲಿಯಂ ಇಂಧನ ವಾತಾವರಣಕ್ಕೆ ಕಾರ್ಬನ್ ಡೈಆಕ್ಸೈಡ್‌ನ್ನು ಹೆಚ್ಚಿನ ಪ್ರಮಾಣದಲ್ಲಿ ಸೇರಿಸುತ್ತಾ ಹೋಗುತ್ತದೆ. ಆದರೆ, ಜೈವಿಕ ಇಂಧನ ಸಸ್ಯಗಳು ವಾತಾವರಣದಲ್ಲಿನ ಕಾರ್ಬನ್ ಡೈಆಕ್ಸೈಡ್‌ನ ಕೆಲವು ಭಾಗವನ್ನು ತಾವೇ ಪುನ: ಬಳಸಿಕೊಳ್ಳುತ್ತವೆ.
  • ಜೈವಿಕ ಇಂಧನವು ಪರಿಸರ ಸ್ನೇಹಿ ಹಾಗೂ ನವೀಕರಿಸಬಹುದಾದ ಇಂಧನ.
  • ಇಂಜಿನ್ ಮಾರ್ಪಾಟಿನ ಅಗತ್ಯವಿಲ್ಲ.
  • ಜೈವಿಕ ಇಂಧನದಲ್ಲಿ ಗಂಧಕದ ಪ್ರಮಾಣ ಅತ್ಯಂತ ಕಡಿಮೆ.
  • ಸುರಕ್ಷಿತ ನಿರ್ವಹಣೆ, ಸಂಗ್ರಹಣೆ ಮತ್ತು ಸಾಗಾಣಿಕೆ.
  • ಇಂಜಿನ್‌ನ ಕಾರ್ಯಕ್ಷಮತೆ ಹೆಚ್ಚಿಸಿ, ಇಂಜಿನ್‌ನ ಬಾಳಿಕೆಯನ್ನು ಹೆಚ್ಚಿಸುತ್ತದೆ.
  • ಹೈಡ್ರೋಕಾರ್ಬನ್, ಸುಡದ ಇಂಗಾಲದ ಕಣಗಳ ಉಗುಳುವಿಕೆಯಲ್ಲಿ ಇಳಿಮುಖ.
  • ಜೈವಿಕ ಇಂಧನದ ಮರಗಳನ್ನು ಬೆಳೆಯುವುದರಿಂದ ಮಣ್ಣಿನ ಸವಕಳಿಯನ್ನು ತಡೆಯಬಹುದು ಮತ್ತು ಮಣ್ಣಿನ ತೇವಾಂಶ ಕಾಪಾಡುವುದರೊಂದಿಗೆ ಆ ಪ್ರದೇಶವನ್ನು ನಿತ್ಯ ಹಸಿರಾಗಿರಿಸಬಹುದು.

Leave a Reply